NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 163 ಎಲೆಕ್ಟ್ರಿಷಿಯನ್, ಫಿಟ್ಟರ್, ವೆಲ್ದರ್, ಪ್ಲಬರ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಕೆಮಿಕಲ್ ಇಂಜಿನಿಯರಿಂಗ್, ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ23/06/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಟಾರಿಯ ಪ್ರಜೆ ಯಾಗಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಹಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 163
ITI / ಟ್ರೇಡ್ ಅಪ್ರೆಂಟಿಸ್ - 86
ಡಿಪ್ಲೋಮ / ಟೆಕ್ನಿಷಿಯನ್ ಅಪ್ರೆಂಟಿಸ್ - 42
ಗ್ರ್ಯಾಜುಯೆಟ್ (ಇಂಜಿನಿಯರಿಂಗ್) ಅಪ್ರೆಂಟಿಸ್ - 31
ಗ್ರ್ಯಾಜುಯೆಟ್ (ನೋನ್-ಇಂಜಿನಿಯರಿಂಗ್) ಅಪ್ರೆಂಟಿಸ್ - 04
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.com / BBA / ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments