ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹೈ ಪರ್ಫಾರ್ಮೆನ್ಸ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮೇ 2024 ಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 1,45,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments