Loading..!

ಎಸ್‌ಬಿಐ(SBI) ಬ್ಯಾಂಕ್ನಲ್ಲಿ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:May 21, 2019
not found
ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ) ನೇಮಕಾತಿ ಒಟ್ಟು 65 ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 12,2019 ರೊಳಗೆ ಅರ್ಜಿಯನ್ನುಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಕೆಳಗೆ ನೀಡಿರುವ ಮಾಹಿತಿಯನ್ನು ಓದಿ.
No. of posts:  65
Application Start Date:  May 21, 2019
Application End Date:  June 12, 2019
Selection Procedure: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬಿಬಿಎಸ್‌, ಸ್ನಾತಕೋತ್ತರ ಪದವಿ ಮತ್ತು ಸಿಎ / ಎಂಬಿಎ/ ಪಿಜಿಡಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Fee: ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್‌ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
Age Limit: ಹುದ್ದೆಗಳಿಗನುಸಾರ 27 ರಿಂದ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪಿಡಬ್ಲ್ಯೂಡಿ (ಸಾಮಾನ್ಯ / ಇಡಬ್ಲ್ಯೂಎಸ್‌) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಬ್ಯಾಂಕ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ,
ಮ್ಯಾನೇಜರ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/-ರೂ ಮತ್ತು
ಅಡ್ವೈಸರ್ ಫಾರ್ ಫ್ರಾಡ್ ಮ್ಯಾನೇಜ್ಮೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments