Loading..!

ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:Sept. 6, 2023
not found

ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ 308 ಫೀಲ್ಡ್ ಇಂಜಿನಿಯರ್ ಮತ್ತುಫೀಲ್ಡ್ ಆಫೀಸರ್,  ಜೂನಿಯರ್ ಫೀಲ್ಡ್ ಇಂಜಿನಿಯರ್ ಮತ್ತುಜೂನಿಯರ್  ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು18/09/2023 ರಿಂದ ಆರಂಭಗೊಂಡು 09/10/2023 ರಂದು ಕೊನೆಗೊಳ್ಳುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  308
Application Start Date:  Sept. 18, 2023
Application End Date:  Oct. 9, 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI/ ಡಿಪ್ಲೊಮಾ/ BE/ B.Tech/ LLB/ M.Sc/ M.Tech/ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.  
-  ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ.600/- 
- ಜೂನಿಯರ್ ಫೀಲ್ಡ್ ಇಂಜಿನಿಯರ್ ಮತ್ತು ಜೂನಿಯರ್ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ.300/- ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.  
- SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.SJVN ಲಿಮಿಟೆಡ್ ನ ನೇಮಕಾತಿ ನಿಯಮಾನುಸಾರವಾಗಿ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ವೇತನವನ್ನು ನಿಗದಿಪಡಿಸಲಾಗಿದೆ.
- ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ.60000/- 
- ಜೂನಿಯರ್ ಫೀಲ್ಡ್ ಇಂಜಿನಿಯರ್ ಮತ್ತು ಜೂನಿಯರ್  ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ. 45000 /- ರೂ ವೇತನವನ್ನು ನಿಗದಿಪಡಿಸಲಾಗಿದೆ 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments