ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 20 ಕೋರ್ಟ್ ಮಾಸ್ಟರ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ05/07/2024 ರಾತ್ರಿ 11:59 ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Recruitment Cell, Supreme Court of India,
Tilak Marg, New Delhi-110001.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ Rs. 67700 – Rs. 208700 ವರೆಗೆ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments