ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ನಕಲು- ಬೆರಳಚ್ಚುಗಾರ ಮತ್ತು ಆದೇಶ ಜಾರಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20 ಜೂನ್ 2024 ಹಾಗೂ ಕೊನೆಯ ದಿನಾಂಕ 19 ಜುಲೈ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಆದರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 26
ಬೆರಳಚ್ಚುಗಾರ - 03
ನಕಲು- ಬೆರಳಚ್ಚುಗಾರ - 03
ಆದೇಶ ಜಾರಿಕರ - 20
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC / PUC ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
* ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ.150/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಬೆರಳಚ್ಚುಗಾರ ಹುದ್ದೆಗಳಿಗೆ : 21,400-ರೂ ಗಳಿಂದ 42,000/- ರೂ
ಆದೇಶ ಜಾರಿಕರ ಹುದ್ದೆಗಳಿಗೆ : 19,950-ರೂ ಗಳಿಂದ 37,900/-ರೂ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments