Loading..!

ಪಶ್ಚಿಮ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 570 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: ITI SSLC
Published by: Basavaraj Halli | Date:March 3, 2020
not found
ಪಶ್ಚಿಮ ಮಧ್ಯ ರೈಲ್ವೆಯಲ್ಲಿ 570 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ITI ವಿದ್ಯಾರ್ಹತೆಯನ್ನು ಪೂರೈಸಿದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 15, 2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  570
Application Start Date:  Feb. 15, 2020
Application End Date:  March 15, 2020
Qualification: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ/ಎಸ್‌ಎಸ್‌ಎಲ್‌ಸಿ ಜೊತೆಗೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು.
Fee: * ಅರ್ಜಿದಾರರು 170/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಮತ್ತು ನಿರ್ವಹಣಾ ಶುಲ್ಕ 70 ಮಾತ್ರ ನೀಡಬೇಕು.
Age Limit: ದಿನಾಂಕ ಜನವರಿ 1, 2020ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಪಶ್ಚಿಮ ಕೇಂದ್ರ ರೈಲ್ವೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 15, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

* ಈ ಅಧಿಸೂಚನೆಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.
to download official notification

Comments

Sindhu Sindhu Feb. 24, 2020, 10:24 p.m.
Raja Rajeesab Feb. 25, 2020, 8:02 a.m.