Loading..!

ಇಂದು 10 ಸಾವಿರ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ
| Date:5 ಜನವರಿ 2019
not found
ಬೆಂಗಳೂರು : ಇಂದು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ 10 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇರ ನೇಮಕದ ಫಲಿತಾಂಶ ಪ್ರಕಟವಾಗಲಿದೆ.

ಶಿಕ್ಷಣ ಇಲಾಖೆಯ ಸರ್ವಶಿಕ್ಷಣ ಅಭಿಯಾನ ಕಚೇರಿಯ ಸಭಾಂಗಣದಲ್ಲಿ ಇಂದು ಬೆಳಗ್ಗೆ 11.30 ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಪ್ರಕಟಿಸಲಿದ್ದಾರೆ.

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ 10 ಸಾವಿರ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ನೇರ ನೇಮಕ ಮೂಲಕ ಶಿಕ್ಷಕರ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

Comments