Loading..!

ಕರ್ನಾಟಕ ರಾಜ್ಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
| Date:16 ಸೆಪ್ಟೆಂಬರ್ 2019
not found
ಭಾರತೀಯ ಅಂಚೆ ಇಲಾಖೆಯೂ ದೇಶಾದ್ಯಂತ 10 ಸಾವಿರಕ್ಕೂ ಹೆಚ್ಚು ಅಂಚೆ ಸೇವಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ಮತ್ತೆ ವಿಸ್ತರಿಸಿದೆ. ಈಗ ಅಭ್ಯರ್ಥಿಗಳು ಸೆ.16 ರ ವರೆಗೆ ರಿಜಿಸ್ಟ್ರೇಷನ್ ಮಾಡಿಸಿಕೊಂಡು, ಅರ್ಜಿ ಶುಲ್ಕ ಪಾವತಿಸಬಹುದಾಗಿದೆ. ಸಂಪೂರ್ಣವಾಗಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರ ವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಅವಧಿಯನ್ನು ಅಂಚೆ ಇಲಾಖೆಯು ವಿತರಿಸುತ್ತಿರುವುದು ಎರಡನೇ ಬಾರಿ. ಇನ್ನೂ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಅಗಸ್ಟ ಮೊದಲನೇ ವಾರದಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟು ಹುದ್ದೆಗಳ ಪೈಕಿ ಕರ್ನಾಟಕ ರಾಜ್ಯದ ವಿವಿಧ ಅಂಚೆವೃತ್ತಗಳಲ್ಲಿ 2637 ಹುದ್ದೆಗಳಿಗೆ ನೇಮಕ ನಡೆಯುತ್ತಿದೆ.

ಈ ಅಧಿಸೂಚನೆ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments