Others 05 ಏಪ್ರಿಲ್ 2025 1 year ago
Published by Bhagya R K

ಬೆಂಗಳೂರು ಗ್ರಾಮಾಂತರದಲ್ಲಿ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರದಲ್ಲಿ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಸಕಾಲ ಮಿಷನ್‌ನಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿ ಹೊರಗುತ್ತಿಗೆ ಆಧಾರದ ಮೇಲೆ ನಡೆಯಲಿದೆ.

ಹುದ್ದೆಯ ವಿವರ :
- ಹುದ್ದೆಯ ಹೆಸರು : ಜಿಲ್ಲಾ ಮಾಹಿತಿ ಮತ್ತು ತಂತ್ರಜ್ಞಾನ ಸಮಾಲೋಚಕರು  
- ಹುದ್ದೆಗಳ ಸಂಖ್ಯೆ : 1  

- ವೇತನ ಶ್ರೇಣಿ : 
ಅಭ್ಯರ್ಥಿಗಳಿಗೆ ಮಾಸಿಕವಾಗಿ ₹27,100/- ರೂ ಗಳ ವರೆಗೆ ವೇತನವನ್ನು ನೀಡಲಾಗತ್ತದೆ.

ಅರ್ಹತೆ :  
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೇಶನ್ ಸೈನ್ಸ್‌ನಲ್ಲಿ BE ಅಥವಾ B.Tech ಪದವಿ ಹೊಂದಿರಬೇಕು. ಫ್ರೆಶರ್ಸ್ ಮತ್ತು ಅನುಭವಿದಾರರೂ ಅರ್ಜಿ ಸಲ್ಲಿಸಬಹುದು. ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಮೇಲೆ ಉತ್ತಮ ಹಿಡಿತ ಅಗತ್ಯವಿದೆ.

ಅರ್ಜಿ ಸಲ್ಲಿಕೆ ವಿಧಾನ :  
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಸೂಚನೆ ಜೊತೆ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಪೂರೈಸಿ, ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:

ಅರ್ಜಿ ಸಲ್ಲಿಸುವ ವಿಳಾಸ :  
ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ,  
ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ,  
ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ -562110

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 9, 2025  

ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆ ಪಡೆಯಲು [bangalorerural.nic.in](https://bangalorerural.nic.in) ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಹುಡುಕುತ್ತಿರುವವರಿಗೆ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶವಾಗಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ಯೋಜನೆಯೊಂದಿಗೆ ಕಾರ್ಯನಿರ್ವಹಿಸಲು ಸುದೀಪವಾದ ವೇದಿಕೆ ನೀಡುತ್ತದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments