ರಾಜ್ಯ ಸರ್ಕಾರದ ಸಕಾಲ ಮಿಷನ್‌ನಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿ ಹೊರಗುತ್ತಿಗೆ ಆಧಾರದ ಮೇಲೆ ನಡೆಯಲಿದೆ.
ಹುದ್ದೆಯ ವಿವರ :
- ಹುದ್ದೆಯ ಹೆಸರು : ಜಿಲ್ಲಾ ಮಾಹಿತಿ ಮತ್ತು ತಂತ್ರಜ್ಞಾನ ಸಮಾಲೋಚಕರು
- ಹುದ್ದೆಗಳ ಸಂಖ್ಯೆ : 1
- ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ಮಾಸಿಕವಾಗಿ ₹27,100/- ರೂ ಗಳ ವರೆಗೆ ವೇತನವನ್ನು ನೀಡಲಾಗತ್ತದೆ.
ಅರ್ಹತೆ :
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೇಶನ್ ಸೈನ್ಸ್‌ನಲ್ಲಿ BE ಅಥವಾ B.Tech ಪದವಿ ಹೊಂದಿರಬೇಕು. ಫ್ರೆಶರ್ಸ್ ಮತ್ತು ಅನುಭವಿದಾರರೂ ಅರ್ಜಿ ಸಲ್ಲಿಸಬಹುದು. ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಮೇಲೆ ಉತ್ತಮ ಹಿಡಿತ ಅಗತ್ಯವಿದೆ.
ಅರ್ಜಿ ಸಲ್ಲಿಕೆ ವಿಧಾನ :
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಸೂಚನೆ ಜೊತೆ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಪೂರೈಸಿ, ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ,
ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ,
ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ -562110
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 9, 2025
ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆ ಪಡೆಯಲು [bangalorerural.nic.in](https://bangalorerural.nic.in) ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಹುಡುಕುತ್ತಿರುವವರಿಗೆ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶವಾಗಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ಯೋಜನೆಯೊಂದಿಗೆ ಕಾರ್ಯನಿರ್ವಹಿಸಲು ಸುದೀಪವಾದ ವೇದಿಕೆ ನೀಡುತ್ತದೆ.
Comments