Loading..!

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:21 ಆಗಸ್ಟ್ 2025
Image not found

               ಬ್ಯಾಂಕ್ ಆಫ್ ಬರೋಡಾ ವೃತ್ತಿಪರರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ28/08/2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.  

ಬ್ಯಾಂಕ್ ಆಫ್ ಬರೋಡಾದಲ್ಲಿನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 18/08/2025 ರಿಂದ 28/08/2025 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿರುತ್ತದೆ. 


ಅರ್ಹತೆ : ಕಂಪ್ಯೂಟರ್ ವಿಜ್ಞಾನ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಬಿಇ/ ಬಿ.ಟೆಕ್. ಕಂಪ್ಯೂಟರ್ ವಿಜ್ಞಾನ, ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ, ಯಂತ್ರ ಕಲಿಕೆ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ವಿಜ್ಞಾನ / ಮಾಹಿತಿ ತಂತ್ರಜ್ಞಾನ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನದಲ್ಲಿ ಬಿಇ/ ಬಿ.ಟೆಕ್.


ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2025 ವಯಸ್ಸಿನ ಮಿತಿ : 
ಕನಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 48 ವರ್ಷಗಳು
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಗೆ ಅವಕಾಶವಿದೆ.


ಅರ್ಜಿ ಶುಲ್ಕ :
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ.850/- (ಜಿಎಸ್‌ಟಿ ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು
SC, ST, PWD, ESM (ಮಾಜಿ ಸೈನಿಕರು) ಮತ್ತು ಮಹಿಳೆಯರಿಗೆ: ರೂ.175/- (GST ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು


ಪ್ರಮಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:29-07-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2025

Comments