ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) 2025 ರ ತನ್ನ ಅಧಿಕೃತ ಅಧಿಸೂಚನೆಯ ಮೂಲಕ 05 ಅಕ್ಸ್‌ಪರ್ಟ್ ಡೆವಲಪರ್ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ12-ಸೆಪ್ಟೆಂಬರ್-2025 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ವಿವರಗಳು :
ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
ಹುದ್ದೆಯ ಹೆಸರು: ಅಕ್ಸ್‌ಪರ್ಟ್ ಡೆವಲಪರ್
ಒಟ್ಟು ಹುದ್ದೆಗಳು: 05
ಅಧಿಸೂಚನೆ ಸಂಖ್ಯೆ: BMRCL/HR/0015/IT/2025
ವೇತನ: ₹62,500/- ಪ್ರತಿಮಾಸ
ಅರ್ಜಿಯ ಅಂತಿಮ ದಿನಾಂಕ: 12-09-2025
ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE / B.Tech / BCA / B.Sc (ಅಥವಾ ಸಮಾನ ಪದವಿ) ವಿದ್ಯಾರ್ಹತೆಗಳಲ್ಲಿ ಯಾವುದಾದರೂ ಹೊಂದಿರಬೇಕು:
ವಯೋಮಿತಿ :
ಗರಿಷ್ಠ ವಯಸ್ಸು: 36 ವರ್ಷ
ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಅರ್ಜಿ ಶುಲ್ಕ :
ಅಧಿಸೂಚನೆಯಲ್ಲಿ ವಿವರಿಸಲಾಗಿಲ್ಲ.
ಆಯ್ಕೆ ವಿಧಾನ :
ಅಧಿಸೂಚನೆಯ ಪ್ರಕಾರ ಶಾರ್ಟ್‌ಲಿಸ್ಟಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ :
- ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bmrc.co.in ಗೆ ಭೇಟಿ ನೀಡಿ.
- ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಆನ್‌ಲೈನ್ ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ಕಾಪಿ ಸಂಗ್ರಹಿಸಿಕೊಳ್ಳಿ.
ಪ್ರಮುಖ ದಿನಾಂಕಗಳು
- ಅರ್ಜಿಯ ಪ್ರಾರಂಭ ದಿನಾಂಕ: 08-09-2025
- ಅರ್ಜಿಯ ಕೊನೆಯ ದಿನಾಂಕ: 12-09-2025
👉 ಬೆಂಗಳೂರು ಮೆಟ್ರೋದಲ್ಲಿ ಐಟಿ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
Comments