Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ BMTC, KSRTC & KUWSDB ಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by: Yallamma G | Date:6 ಜುಲೈ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ (KSRTC) 36 ಸಹಾಯಕ ಸಂಚಾರ ನಿರೀಕ್ಷಕರು ಮತ್ತು ತಾಂತ್ರಕ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ 2500 ಕಂಡೆಕ್ಟರ್ ಮತ್ತು ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ 64 ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು KEA ಯು ದಿನಾಂಕ: ಜುಲೈ 13 ಮತ್ತು 14 2024ರಂದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಕನ್ನಡ ಭಾಷಾ ಪರೀಕ್ಷೆಯನ್ನು 20 ಜುಲೈ 2024  ರಂದು ಪರೀಕ್ಷೆಯನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಅರ್ಜಿ ಸಂಖ್ಯೆ ಮತ್ತು ಅಭ್ಯರ್ಥಿಯ ಹೆಸರನ್ನು ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಪರೀಕ್ಷಾ ಸ್ಥಳಗಳಲ್ಲಿ ಹಾಜರಿರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


- ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.


ಪರೀಕ್ಷಾ ಪ್ರವೇಶ ಪಾತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

Comments