Loading..!

ಜೂ.5ರಂದು ಧಾರವಾಡದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯಿಂದ ಕ್ಯಾಂಪಸ್ ಸಂದರ್ಶನ | ಆಸಕ್ತರು ಭಾಗವಹಿಸಿ
Published by: Yallamma G | Date:4 ಜೂನ್ 2025
not found

ಧಾರವಾಡದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆಯ ಟೌನಹಾಲ್ ಆವರಣದಲ್ಲಿ ಜೂ.5ರಂದು ಬೆಳಗ್ಗೆ 9ಕ್ಕೆ ಇಲ್ಲಿನ 'ಕನೆಕ್ಟ್' ಸಂಸ್ಥೆಯ ಸಹಯೋಗದಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಬೆಂಗಳೂರಿನ ವಿವಿಧ ಕಂಪನಿಗಳು ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿವೆ. 


        ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18ರಿಂದ 25 ವರ್ಷದೊಳಗಿನ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶಗಳಿವೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಹೆಚ್ಚಿನ ಮಾಹಿತಿಗೆ: ದೂ.0836-2436811

Comments