ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾವೇರಿ 2025 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆಗೊಳ್ಳಲಿದ್ದು, ಸರ್ಕಾರಿ ಸೇವೆಯ ಆಸಕ್ತರು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ನೇಮಕಾತಿ ವಿವರಗಳು :
ಸಂಸ್ಥೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾವೇರಿ
ಒಟ್ಟು ಹುದ್ದೆಗಳ ಸಂಖ್ಯೆ : 02
ಹುದ್ದೆಯ ಹೆಸರು : ಸಾಂಕ್ರಾಮಿಕ ರೋಗಶಾಸ್ತ್ರಜ್ಞ
ಉದ್ಯೋಗ ಸ್ಥಳ : ಹಾವೇರಿ, ಕರ್ನಾಟಕ
ಅಪ್ಲಿಕೇಶನ್ ಮೋಡ್ : ನೇರ ಸಂದರ್ಶನ
ಸಂಬಳದ ವಿವರ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.30,000/- ವೇತನ ನೀಡಲಾಗುತ್ತದೆ.
ವಯೋಮಿತಿ :
ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ :
• ಅಭ್ಯರ್ಥಿಗಳು MBBS , ಸ್ನಾತಕೋತ್ತರ ಪದವಿ, B.Sc, M.Sc, MPH, MD, DPH, MAE, Ph.D ಪದವಿ ಪೂರ್ಣಗೊಂಡಿರಬೇಕು.
ಆಯ್ಕೆ ವಿಧಾನ :
ನೇರ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಕೆಳಗಿನ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ.
2. ಸೂಚನೆಯನ್ನು ಪೂರ್ಣವಾಗಿ ಓದಿ.
3. ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
4. ಅಗತ್ಯ ದಾಖಲೆಗಳು ಹಾಗೂ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
5. ನಮೂದಿಸಿದ ದಿನಾಂಕದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಪ್ರಮುಖ ದಿನಾಂಕಗಳು :
ಅಧಿಸೂಚನೆ ಬಿಡುಗಡೆ ದಿನಾಂಕ : 23-ಮೇ-2025
ನೇರ ಸಂದರ್ಶನ ದಿನಾಂಕ : 29-ಮೇ-2025
ಇದು ಆರೋಗ್ಯ ಇಲಾಖೆಯ ಮೂಲಕ ನೇರ ನೇಮಕಾತಿಗೆ ಅವಕಾಶವಿರುವ ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಕಳೆದುಕೊಳ್ಳದೆ ಸಮಯಕ್ಕೆ ಅರ್ಜಿ ಸಲ್ಲಿಸಿ, ನೇರ ಸಂದರ್ಶನಕ್ಕೆ ಹಾಜರಾಗಬೇಕು.
Comments