ಸಮಾಜ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:15 ನವೆಂಬರ್ 2024
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪದವಿ ಪಾಸಾದ SC ಅಭ್ಯರ್ಥಿಗಳಿಗಾಗಿ PSI & ಪ್ಯಾರಾ ಮಿಲಿಟರಿಗೆ ಸೇರಲು 75 ದಿನಗಳ ವಸತಿ ಸಹಿತ ಉಚಿತ ತರಬೇತಿ (Free Coaching) ನೀಡಲು ಅರ್ಹ ಅಭ್ಯರ್ಥಿಗಳಿಂದ ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇರವಾಗಿ Degree ಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಉಚಿತ ತರಬೇತಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ (In service) ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ 40 ವರ್ಷದೊಳಗಿನವರೂ ಕೂಡಾ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30-11-2024. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.

Comments