ರಾಜ್ಯ ಸರ್ಕಾರದಿಂದ GPSTR ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆಪಟ್ಟಿ ಪ್ರಕಟ

ರಾಜ್ಯ ಸರ್ಕಾರದಿಂದ GPSTR ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by Yallamma G
09 ಮಾರ್ಚ್ 2023 Others

ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ (6-8th) ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಶಿಕ್ಷಣ ಇಲಾಖೆಯು ಪ್ರಕಟಿಸಿದ್ದು ಅಂತಿಮವಾಗಿ 13,352 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನು ಉಳಿದ 1648 ಹುದ್ದೆಗಳು ಖಾಲಿ ಉಳಿದಿದ್ದು ಅವುಗಳಿಗೆ ಮುಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭರ್ತಿ ಮಾಡಲಾಗುತ್ತದೆ. ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನ್ ಮೊದಲ ವಾರದಲ್ಲಿ ನೇಮಕಾತಿ ಪತ್ರ ನೀಡಲಾಗುತ್ತದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.  
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.