District Urban Development Cell
25 ಜುಲೈ 2019
7 years ago
ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಿ ಮರು ಅಧಿಸೂಚನೆ ಪ್ರಕಟಿಸಲಾಗಿದೆ
2019 ನೇ ಸಾಲಿನ ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ. ಈ ನೇಮಕಾತಿಯಲ್ಲಿ ಒಟ್ಟು 21 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಹಾಲಿ ಒಂಬತ್ತು ಹುದ್ದೆಗಳು ವಿವಿಧ ಕಾರಣಗಳಿಂದ ಹೆಚ್ಚುವರಿಯಾಗಿ ಖಾಲಿ ಉಳಿದಿರುವ ಕಾರಣ ನೇರ ನೇಮಕಾತಿಗೆ ಈ ಒಂಬತ್ತು ಹುದ್ದೆಗಳನ್ನು ಹೆಚ್ಚುವರಿಯಾಗಿ ಸೇರಿಸಿ ಪರಿಷ್ಕೃತ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಭ್ಯರ್ಥಿಗಳು ಪರಿಷ್ಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿರುತ್ತದೆ.
Comments