ಶೀಘ್ರದಲ್ಲೇ ಕರ್ನಾಟಕ ಅರಣ್ಯ ಇಲಾಖೆಯಿಂದ 339 ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆ ದಿನಾಂಕ ಘೋಷಣೆ
Published by: Basavaraj Halli | Date:27 ಆಗಸ್ಟ್ 2021

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು ದಿನಾಂಕ 2 ಮಾರ್ಚ್ 2020 ರಂದು 339 ಅರಣ್ಯ ರಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗೂ ದಿನಾಂಕ 6 ಮಾರ್ಚ್ 2021ರಲ್ಲಿ ಅರಣ್ಯ ರಕ್ಷ ಕ ಹುದ್ದೆಯ ನೇಮಕಾತಿ ಕುರಿತಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ 1 ಅನುಪಾತ 20 ರಂತೆ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು, ಹಾಗೂ ಅಭ್ಯರ್ಥಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೂಡ ಅವಕಾಶ ನೀಡಿತ್ತು.
ಸದರಿ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಅಂತಿಮಗೊಳಿಸಿ ಇದೀಗ ಪ್ರಕಟಣೆಯನ್ನು ಹೊರಡಿಸಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ದೇಹದಾರ್ಡ್ಯತೆ, ದೈಹಿಕ ತಾಳ್ವಿಕೆ ಪರೀಕ್ಷೆ ಹಾಗೂ ದೈಹಿಕ ಕಾರ್ಯಸಮರ್ಥತೆಯ ಪರೀಕ್ಷೆಯನ್ನು ಅರ್ಹ ಅಭ್ಯರ್ಥಿಗಳಿಗೆ ನಡೆಸುವುದಾಗಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ

Comments