Loading..!

KPSCಯಿಂದ ಕೃಷಿ ಇಲಾಖೆಯಿಂದ ಶೀಘ್ರದಲ್ಲಿಯೇ 961 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by: Bhagya R K | Date:11 ಜುಲೈ 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಭರ್ತಿಯಾಗದೆ ಖಾಲಿ ಇರುವ ಸುಮಾರು 961 ವಿವಿಧ ವೃಂದದ ಹುದ್ದೆಗಳನ್ನು ಹಂತ ಹಂತವಾಗಿ ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ಆರ್ಥಿಕ ಇಲಾಖೆಯಿಂದ ಈಗಾಗಲೇ ಅನುಮತಿ ಪಡೆದು, ಕರ್ನಾಟಕ ಲೋಕಸೇವಾ ಆಯೋಗಕ್ಕೆ (KPSC) ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಮಾನ್ಯ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರು ಮಾಹಿತಿ ನೀಡಿರುತ್ತಾರೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು : 961
ಕಲ್ಯಾಣ ಕರ್ನಾಟಕ ಭಾಗದಲ್ಲಿ 
ಕೃಷಿ ಅಧಿಕಾರಿ - 34
ಸಹಾಯಕ ಕೃಷಿ ಅಧಿಕಾರಿ - 223
ದ್ವಿತೀಯ ದರ್ಜೆ ಸಹಾಯಕರು - 17 
ಬೆರಳಚ್ಚುಗಾರರು - 17
- ಉಳಿಕೆ ವೃಂದದಲ್ಲಿ 
ಕೃಷಿ ಅಧಿಕಾರಿ - 84
ಸಹಾಯಕ ಕೃಷಿ ಅಧಿಕಾರಿಗಳು - 586

ಈ ಹುದ್ದೆಗಳಿಗೆ ಅರ್ಹತೆ ಹೊಂದುವ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ..

Comments