ಕರ್ನಾಟಕ ಸರ್ಕಾರದಿಂದ IAS & KAS ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಸವ ದಿನಾಂಕ ವಿಸ್ತರಣೆ
Published by: Yallamma G | Date:19 ಸೆಪ್ಟೆಂಬರ್ 2024
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಕರ್ನಾಟಕ ಹಜ್ ಭವನ, ಬೆಂಗಳೂರು ಇಲ್ಲಿ ಐಎಎಸ್/ ಕೆಎಎಸ್ ಪರೀಕ್ಷೆಗಳಿಗೆ ವಸತಿ ಸಹಿತ ಉಚಿತ ತರಬೇತಿ ನೀಡಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಳೆದ ಜುಲೈನಲ್ಲಿ ಅಧಿಸೂಚನೇ ಹೊರಡಿಸಿ ಅರ್ಜಿ ಆಹ್ವಾನಿಸಿತ್ತು. ಇದೀಗ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸುವ ಕೊನೇ ದಿನಾಂಕವನ್ನು ವಿಸ್ತರಣೆ ಮಾಡಿದ್ದು ಅರ್ಜಿ ಸಲ್ಲಿಸಲು ಸೆ.20 ವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಲಭ್ಯ ಸೀಟುಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, ಆ ಮೂಲಕ ಆಯ್ಕೆ ಮಾಡಲಾಗುವುದು.
- ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ https://sevasindhu.karnataka.gov.in/Sevasindhu/Departmentservices. ಸಂಪರ್ಕಿಸ ಬಹುದಾಗಿದೆ.

Comments