Loading..!

ದಸರಾ ವಿಶೇಷ : ರಾಜ್ಯ ಸರ್ಕಾರ ಸಿವಿಲ್ ಸೇವೆಗಳಲ್ಲಿ 3 ವರ್ಷದ ವಯೋಮಿತಿ ಸಡಿಲಿಕೆ ಘೋಷಣೆ!
Published by: Yallamma G | Date:30 ಸೆಪ್ಟೆಂಬರ್ 2025
Image not found
ಮಹತ್ವದ ಆದೇಶ

  • ದಿನಾಂಕ: ಸೆಪ್ಟೆಂಬರ್ 29, 2025

  • ವಿವರಣೆ: ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ದಸರಾ ವಿಶೇಷ ಉಡುಗೊರೆ ಘೋಷಣೆ ಮಾಡಿದಂತೆ, ಸಿವಿಲ್ ಸೇವೆ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ ನೀಡಿದೆ.

  • ಅನುಷ್ಠಾನ ಸಮಯ: ಈ ಆದೇಶವು 2027 ಡಿಸೆಂಬರ್ 31ರೊಳಗೆ ನಡೆಯುವ ಎಲ್ಲಾ ನೇರ ನೇಮಕಾತಿಗಳಿಗೆ ಅನ್ವಯಿಸುತ್ತದೆ.

  • ಗುರಿ: ನೇರ ನೇಮಕಾತಿ ಉದ್ಯೋಗಿಗಳಲ್ಲಿ ವಯೋಮಿತಿ ಸಮಸ್ಯೆ ಇರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವುದು.


ವಯೋಮಿತಿ ಸಡಿಲಿಕೆಯ ವಿವರಗಳು

ವರ್ಗ ಹಳೆಯ ವಯೋಮಿತಿ ಹೊಸ ವಯೋಮಿತಿ

ಸಾಮಾನ್ಯ 35 ವರ್ಷ 38 ವರ್ಷ

OBC 38 ವರ್ಷ 41 ವರ್ಷ

SC/ST/ಪ್ರವರ್ಗ-1 40 ವರ್ಷ 43 ವರ್ಷ

ವಿವರಣೆ:

  • ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಈ ಸಡಿಲಿಕೆ ಒಂದೇ ಬಾರಿ ಅನ್ವಯವಾಗುತ್ತದೆ.

  • ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಯುವ ನೇರ ನೇಮಕಾತಿಯ ಎಲ್ಲ ಹುದ್ದೆಗಳಿಗೆ ಅನ್ವಯ


# ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಪ್ರತಿಫಲ
             ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಸಡಿಲಿಸಬೇಕೆಂದು ಒತ್ತಾಯಿಸಿ ಬೃಹತ್ ಸಂಖ್ಯೆಯ ಉದ್ಯೋಗ ಆಕಾಂಕ್ಷಿಗಳು, ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದು ಸೆ.25 ರಂದು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಿಎಂ, ಡಿಸಿಎಂ ವಿರುದ್ಧ ಕೂಗು ಕೇಳಿಬಂದಿತ್ತು. ಇದೀಗ ಈ ಪ್ರತಿಭಟನೆಯ ಬೆನ್ನಲ್ಲೇ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!
                        ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ವ್ಯಾಪಕ ಪ್ರತಿಭಟನೆಗಳಿಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಅತಿಥಿ ಉಪನ್ಯಾಸಕರ ನೇಮಕ ವಿಚಾರ ಸಂಬಂಧ ಸೆಪ್ಟೆಂಬರ್ 29 ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆದ ಪತ್ರ ಬರೆದಿದ್ದಾರೆ. ಪತ್ರದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಲು ಅನುಮತಿ ನೀಡಲಾಗಿದೆ.
                       ಈ ರೀತಿ ಮುಂದುವರಿಕೆ ನಂತರವೂ ಕಾರ್ಯಭಾರವಿದ್ದಲ್ಲಿ ಅಂತಹ ಕಾರ್ಯಭಾರಕ್ಕೆ ಎದುರಾಗಿ ನ್ಯಾಯಾಲಯದ ಮಧ್ಯಂತರ ಆದೇಶದ ಅನುಸಾರ ಪ್ರಸ್ತುತ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.

"ಪ್ರತಿಭಾವಂತ ವಿದ್ಯಾರ್ಥಿಗಳೇ, ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯನ್ನು ಮೀರಿಸಿ! ರಿಯಾಯಿತಿಯೊಂದಿಗೆ ಲಭ್ಯವಿರುವ ಪುಸ್ತಕಗಳನ್ನು ಲಿಂಕ್ ಮೂಲಕ ಈಗಲೇ ಖರೀದಿಸಿ ಮತ್ತು ಯಶಸ್ಸಿಗೆ ದಾರಿ ಮಾಡಿ."

Comments