Loading..!

ಕರ್ನಾಟಕ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ನಡೆಯಲಿರುವ ಮಹಾ ನೇಮಕಾತಿಗಳು : ಈ ಕುರಿತ ಕಿರು ಮಾಹಿತಿ ನಿಮಗಾಗಿ....
Published by: Basavaraj Halli | Date:28 ಅಕ್ಟೋಬರ್ 2023
Image not found
- ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗಜೆಟೆಡ್ ಪ್ರೊಬೆಷನರಿ ಒಟ್ಟು 300 ಕ್ಕೂ ಹೆಚ್ಚು ಹುದ್ದೆಗಳು (ಈಗಾಗಲೇ KPSC ಗೆ ಪ್ರಸ್ತಾವ ಕಲಿಸುವ ಕಾರ್ಯ ಪ್ರಗತಿಯಲ್ಲಿದೆ ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ)

* ಈ ಬಾರಿ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುವ ಸಾಧ್ಯತೆ ಇದೆ.

* ಎಲ್ಲಾ ಅಂದುಕೊಂಡಂತೆ ನಡೆದರೆ ನವಂಬರ್ ತಿಂಗಳಲ್ಲಿ ಅಧಿಸೂಚನೆ ಬರಲಿದೆ.

- ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 17,00 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.  ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ 


- ಸಾರಿಗೆ ಸಂಸ್ಥೆಗಳಲ್ಲಿ ಪ್ರಸ್ತುತ 13 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ 8719 ಹುದ್ದೆಗಳ ನೇಮಕಾತಿಗಾಗಿ ಸರಕಾರ ಶೀಘ್ರದಲ್ಲೇ ಅಧಿಸೂಚನೆ ನೀಡಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

- ಇನ್ನು ಅರಣ್ಯ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಪೈಕಿ 800 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಇತ್ತೀಚಿಗೆ ತಿಳಿಸಿದ್ದಾರೆ.

- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಇತ್ತೀಚಿಗೆ ವಿಚಾರಿಸಿದಾಗ 380 PDO ಹುದ್ದೆಗಳಿಗೆ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದ್ದು, ಕಡತವು ಸದರಿ ಇಲಾಖೆಯಲ್ಲಿರುವುದಾಗಿ, ಹಾಗೂ ಶೀಘ್ರದಲ್ಲೇ ನೋಟಿಫಿಕೇಶನ್ ಬಿಡುಗಡೆಗೊಳಿಸುವ ಕುರಿತು ಮಾಹಿತಿ ದೊರೆತಿದೆ.

- ಪೊಲೀಸ್ ಇಲಾಖೆಯಲ್ಲಿನ 20 ಸಾವಿರ ಕಾನ್ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲಿಯೇ ಹಂತ ಹಂತವಾಗಿ ಅಧಿಸೂಚನೆ ಬಿಡುಗಡೆಗೊಳಿಸಲಾಗುವದು.

- ಪ್ರಸ್ತುತ ರಾಜ್ಯ ಸರ್ಕಾರದಲ್ಲಿ 40 ಸಾವಿರ ಶಿಕ್ಷಕರ ಕೊರತೆಯಿದ್ದು, ಬರುವ ವರ್ಷದಲ್ಲಿಯೇ 20 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಸಿ, 2024 ರ ಅಂತ್ಯದೊಳಗಾಗಿ ಆದೇಶ ಪತ್ರ ನೀಡುವುದಾಗಿ ಸಚಿವರು ತಿಳಿಸಿದ್ದಾರೆ.

- 2023-2024 ನೇ ಸಾಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ್ತೆ ಸರ್ಕಾರ ಶೀಘ್ರ ದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರು ಸೂಚನೆಯನ್ನು ನೀಡಿದ್ದಾರೆ. 

- ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ  ಶೀಘ್ರದಲ್ಲೇ ಹೊಸದಾಗಿ 2454 ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು, ಈಗಾಗಲೇ ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ. 

ಇನ್ನು ಸಾವಿರಾರು ಹುದ್ದೆಗಳ ನೇಮಕಕ್ಕೆ ಸರ್ಕಾರ ತಯಾರಿ ನಡೆಸಿದ್ದು, ಈ ಕುರಿತ ಮಾಹಿತಿಯನ್ನು ನಿಮ್ಮ KPSCVaani ಜಾಲತಾಣದಲ್ಲಿ ಹಂತ ಹಂತವಾಗಿ ನೀಡಲಾಗುವುದು. ನಿರೀಕ್ಷಿಸಿ ಹಾಗೂ ನಿಮ್ಮ ಸ್ಪರ್ಧಾತ್ಮಕ ಪರೀಕ್ಷಾ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಬೇಗನೆ ಯಶಸ್ವಿಯಾಗಿ.....All The Best 

Comments

Deepa Naik ನವೆಂ. 6, 2023, 12:56 ಅಪರಾಹ್ನ