ಕಾಲೇಜು ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:1 ಫೆಬ್ರುವರಿ 2022

ಕರ್ನಾಟಕ ರಾಜ್ಯ ಸರಕಾರದ ಕಾಲೇಜು ಶಿಕ್ಷಣ ಇಲಾಖೆಯು ಇತ್ತೀಚೆಗೆ 2021-22 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಿತ್ತು, ಸದರಿ ಅಭ್ಯರ್ಥಿಗಳ ಅರ್ಹತೆ ಪರಿಗಣಿಸಿ ಇದೀಗ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಡೆಸಲು ಉದ್ದೇಶಿಸಲಾಗಿದ್ದು ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
* ಇಲಾಖೆಯು ಒಟ್ಟು 37 ವಿಷಯಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿಗಳನ್ನು ಪ್ರಕಟಿಸಲಾಗಿರುತ್ತದೆ, ಪಟ್ಟಿಗಳನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ.

Comments