ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 27,000 ಅಥಿತಿ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:27 ಮೇ 2023

2023-2024 ನೇ ಸಾಲಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 27,000 ಅಥಿತಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿಯನ್ನು ನೀಡಿದೆ.ಶೈಕ್ಷಣಿಕ ವರ್ಷದ ಅಂತ್ಯದ ವರೆಗೆ ಎಂಬ ಷರತ್ತನ್ನು ವಿಧಿಸಿ ನೇಮಕ ಮಾಡಿಕೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ಆಯುಕ್ತರು ಸೂಚನೆಯನ್ನು ನೀಡಿದ್ದಾರೆ. ನೇಮಕಗೊಂಡ ಅಥಿತಿ ಶಿಕ್ಷಕರಿಗೆ ಒಂದು ತಿಂಗಳಿಗೆ 10500 ರೂ ಗೌರವಧನವನ್ನು ನೀಡಲಾಗುವುದು.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments