ರಾಜ್ಯದ ಸರ್ಕಾರದಿಂದ ಶೀಘ್ರದಲ್ಲೇ 4000 ಅತಿಥಿ ಶಿಕ್ಷಕರ(Guest Teachers) ನೇಮಕಾತಿ | ಈ ಕುರಿತ ಪ್ರಮುಖ ಮಾಹಿತಿ ಪ್ರಟಕ
Published by: Yallamma G | Date:1 ಜನವರಿ 2022

ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 4,000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಹಂತದಲ್ಲಿ 18,000 ಅತಿಥಿ ಶಿಕ್ಷಕರನ್ನು ನೇಮಕಮಾಡಿಕೊಳಲು ಅಧಿಸೂಚನೆಯನ್ನು ಹೊರಡಿಸಿತ್ತು, ಈಗ ಮತ್ತೆ ಎರಡನೇ ಹಂತದಲ್ಲಿ ಒಟ್ಟು 4,000 ಅತಿಥಿ ಶಿಕ್ಷಕನ್ನು ಷರತ್ತುಗಳಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
- ಶಿಕ್ಷಕ ಹುದ್ದೆಗಿರಬೇಕಾದ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಮ್ಮ ಸಮೀಪದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ವಿವರ ಪಡೆಯಬಹುದಾಗಿದೆ.
* ಈ ನೇಮಕಾತಿಯ ಜಿಲ್ಲಾವಾರು ಖಾಲಿ ಇರುವ ಹುದ್ದೆಯ ವಿವಿರ ಸೇರಿದಂತೆ ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments