KTET & GPSTR 28 ಜುಲೈ 2019 7 years ago

ಕರ್ನಾಟಕ ರಾಜ್ಯ ಪ್ರೌಢ ಶಾಲೆಗಳಲ್ಲಿ 3453 ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪ್ರೌಢ ಶಾಲೆಗಳಲ್ಲಿ 3453 ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
2019-20 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಸರಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳಿಗೆ ಅಗತ್ಯತೆ ಅನುಕೂಲವಾಗಿ 3453 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಅನುಮೋದನೆ ನೀಡಿದೆ. ಬೆಂಗಳೂರು ವಿಭಾಗದಲ್ಲಿ 589, ಮೈಸೂರು ವಿಭಾಗದಲ್ಲಿ 775, ಬೆಳಗಾವಿ ವಿಭಾಗದಲ್ಲಿ 1017 ಹಾಗೂ ಕಲಬುರ್ಗಿ ವಿಭಾಗದಲ್ಲಿ 1072 ಹುದ್ದೆಗಳು ಸೇರಿದಂತೆ ಒಟ್ಟು 3453 ಅತಿಥಿ ಪ್ರೌಢಶಾಲಾ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಪ್ರೌಢ ಶಿಕ್ಷಣ ಇಲಾಖೆಯ ಅನುಮೋದನೆ ನೀಡಿದೆ. ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡುವ ಜವಾಬ್ದಾರಿಯಲ್ಲಿ ಸಂಬಂಧಪಟ್ಟ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಿಗೆ ನೀಡಲಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಸೂಚಿಸಲಾಗಿದ್ದು ಅತಿಥಿ ಶಿಕ್ಷಕರು ತಾಲ್ಲೂಕುವಾರು ಸಂಖ್ಯೆ ಹಾಗೂ ಅನುದಾನದ ವಿವರಗಳೊಂದಿಗೆ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಅನುದಾನ ಬಿಡುಗಡೆ ಮಾಡಲು ಮರು ಪ್ರಸ್ತಾವನೆ ಸಲ್ಲಿಸುವಂತೆ ಎಲ್ಲ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚಿಸಲಾಗಿದೆ. ನೇಮಕಾತಿಗೆ ಅಧಿಸೂಚಿಸಿದ ಪ್ರೌಢಶಾಲಾ ಶಿಕ್ಷಕರು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾದ ತಕ್ಷಣ ಅತಿಥಿ ಶಿಕ್ಷಕರ ಹುದ್ದೆಗಳನ್ನು ತನ್ನಿಂತಾನೆ ರದ್ದಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ
Official Notifications & Links
to download official announcement
Official notification attachment
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments