Loading..!

ಕರ್ನಾಟಕ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 2500 ಶಿಕ್ಷಕರ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ!
Published by: Yallamma G | Date:9 ನವೆಂಬರ್ 2022
not found

ಹಲವು ವರ್ಷಗಳಿಂದ ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅನುಮತಿ ದೊರೆತಿದ್ದು, ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಖಾಲಿ ಇರುವ ಈ ಕೆಳಕಂಡ 2500 ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿಯನ್ನು ನೀಡಿದೆ.


ಹುದ್ದೆಗಳ ವಿವರ :
- ಸಹ ಶಿಕ್ಷಕರು 2200 
- ದೈಹಿಕ ಶಿಕ್ಷಕರು 200
- ವಿಶೇಷ ಶಿಕ್ಷಕರು 100 

* ಈ ಕುರಿತು ಮಾನ್ಯ ಶಿಕ್ಷಣ ಸಚಿವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.

Comments

User ಫೆಬ್ರ. 8, 2023, 7:46 ಪೂರ್ವಾಹ್ನ