ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್-2021 ಎಸ್ಎಸ್ಎಲ್'ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ
Published by: Basavaraj Halli | Date:28 ಜನವರಿ 2021

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್-2021 ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ದಿನಾಂಕ 14 ಜೂನ್ 2021 ರಿಂದ 25 ಜೂನ್ 2021 ರವರೆಗೆ ನಡೆಸಲು ತೀರ್ಮಾನಿಸಿದ್ದು, ಈ ಪರೀಕ್ಷೆಗಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಇದೀಗ ಪ್ರಕಟಿಸಿದೆ. ಸದರಿ ವೇಳಾಪಟ್ಟಿಗೆ ಪಾಲಕರು/ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 28 ಜನವರಿ 2021 ರಿಂದ 26 ಫೆಬ್ರುವರಿ 2021 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಕ್ಷೇಪಣೆಗಳೇನಾದರೂ ಇದ್ದಲ್ಲಿ "ನಿರ್ದೇಶಕರು (ಪರೀಕ್ಷೆಗಳು) ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ಆರನೇ ಅಡ್ಡರಸ್ತೆ ,ಮಲ್ಲೇಶ್ವರಂ ಬೆಂಗಳೂರು 560003 ಇವರಿಗೆ ನೇರವಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ

Comments