ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ
Published by: Basavaraj Halli | Date:2 ಎಪ್ರಿಲ್ 2021

ಕರ್ನಾಟಕ ರಾಜ್ಯ ಭೂ ಮಾಪಕರ ಪರವಾನಿಗೆಗಾಗಿ ಅಧಿಸೂಚನೆ ಹೊರಡಿಸಿ, ಈ ಹುದ್ದೆಗಳ ಆಯ್ಕೆಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 01 ಮತ್ತು 02 ಫೆಬ್ರುವರಿ 2021ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು, ಹಾಗು ನೇಮಕಾತಿ ಪ್ರಕ್ರಿಯೆಯಲ್ಲಿ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಇದೀಗ ಭೂ ಮಾಪಕರ ಪರವಾನಿಗೆ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಲಾಖೆಯು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಸುಮಾರು 654 ಅಭ್ಯರ್ಥಿಗಳು ಸ್ಥಾನ ಪಡೆದಿದ್ದಾರೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments