ಬೆಂಗಳೂರು: ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ 2025 ಹುದ್ದೆಗಳ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದರು.
ಬೇರೆ ರಾಜ್ಯಗಳ ವಯೋಮಿತಿಯನ್ನು ಪರಿಶೀಲಿಸಿ, ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಹೆಚ್ಚಿಸುವ ಸಾಧ್ಯತೆಯಿದ್ದು, ಈ ಕುರಿತು ಸರ್ಕಾರ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದರು.
ಅದರಂತೆ ಇದೀಗ ಒಳಮೀಸಲು ಜಾರಿ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ನೇಮಕಾತಿ ಪ್ರಕ್ರಿಯೆಗೆ ಗರಿಷ್ಠ ವಯೋಮಿತಿಯಲ್ಲಿ2 ವರ್ಷ ಸಡಿಲಿಸಿ ಇಲಾಖೆ ಆದೇಶ ಹೊರಡಿಸಿದೆ. ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸದಂತೆ 2024 ಅ.10ರಂದು ಸರ್ಕಾರ ಆದೇಶ ಮಾಡಿತ್ತು. ಅದರಿಂದಾಗಿ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ತೊಂದರೆಯಾಗಿತ್ತು. ಹೀಗಾಗಿ ಸರ್ಕಾರ ಒಂದು ಬಾರಿಯಕ್ರಮವಾಗಿ2027ರಡಿ.31ರವರೆಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಬ್ ಪೊಲೀಸ್ ಇನ್ಸ್‌ಪೆಕ್ಟರ್, ಡಿಟೆಕ್ಟಿವ್ ಸಬ್ ಇನ್‌ಸ್ಪೆಕ್ಟರ್ (ಡಿಎಸ್‌ಐ), ಪಿಎಸ್‌ಐ ಗುಪ್ತವಾರ್ತೆ, ಸಿಐಡಿ, ಸಶಸ್ತ್ರ ಮೀಸಲು ಸಿಬ್ಬಂದಿ, ಕಾನ್‌ಸ್ಟೆಬಲ್, ಕೆಎಸ್‌ಆರ್‌ಪಿ, ಸಿಐಎಸ್‌ಎಫ್ (ಕೈಗಾರಿಕಾ ಭದ್ರತಾ ಪಡೆ) ಸೇರಿದಂತೆ 17 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ವಯೋಮಿತಿ ಸಡಿಲಿಕೆಯಂತೆ 2 ವರ್ಷದಲ್ಲಿ (ಕಲ್ಯಾಣ ಕರ್ನಾಟಕ ಸೇರಿ) ವಿವಿಧ ವಿಭಾಗದ ಹುದ್ದೆಗಳ ನೇಮಕಾತಿ ನಡೆಯಲಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ :
ಗೃಹ ಇಲಾಖೆಯಲ್ಲಿ ಅಂದಾಜು 15,000 ಕಾನ್‌ಸ್ಟೆಬಲ್ ಹುದ್ದೆಗಳು ಖಾಲಿ ಇದ್ದು, ಆ ಸಂಬಂಧ ನೇಮಕಾತಿಗಾಗಿ ವೇಳಾಪಟ್ಟಿ ರಚಿಸಲು ಸೂಚನೆ ನೀಡಲಾಗಿದೆ. ಈ ಮೂಲಕ ಕೊರತೆಯನ್ನು ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
ಕರ್ನಾಟಕ ಪೊಲೀಸ್ ಹುದ್ದೆಗಳ ಅಪ್ಡೇಟ್
Karnataka Police Constable Age Limit 2025
ಕರ್ನಾಟಕ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ 2025
Karnataka Police Constable Age Limit 2025
ಪೊಲೀಸ್ ನೇಮಕಾತಿ ವಯೋಮಿತಿ ಸಡಿಲಿಕೆ
Karnataka Govt Jobs 2025
Comments