Life is like this loading!

We've to prepare well to perform better

ADVERTISEMENT
Image not found
ADVERTISEMENT
ಪದವಿಪೂರ್ವ ಶಿಕ್ಷಣ ಇಲಾಖೆಯಿಂದ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಿಕೆ
Author: Basavaraj Halli | Date:14 ಮೇ 2021
Image not found
ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ದಿನಾಂಕ 24 ಮೇ 2021ರಿಂದ ಆರಂಭಿಸಬೇಕಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಪರೀಕ್ಷೆಯನ್ನು ನಡೆಸಲು ನಿಗದಿಪಡಿಸುವ ದಿನಾಂಕಕ್ಕೆ ಕನಿಷ್ಠ ಹದಿನೈದು ದಿನಗಳ ಮುಂಚಿತವಾಗಿ ಪ್ರಕಟಿಸಲಾಗುವುದು ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವಿಷಯಕ್ಕೆ ಸಂಬಂಧಿಸಿದಂತೆ ಏನಾದರೂ ಮಾಹಿತಿಗಳಿದ್ದಲ್ಲಿ ಇಲಾಖೆಯು ಕಾಲ ಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುವುದಾಗಿ ಪ್ರಕಟಣೆಯನ್ನು ಹೊರಡಿಸಿದೆ.

* 2020-21ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿಗೆ ದಾಖಲಾದ ಎಲ್ಲ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ತೇರ್ಗಡೆ ಎಂದು ಪರಿಗಣಿಸಲಾಗುವುದು ಎಂದು ಇದೇ ವೇಳೆ ಇಲಾಖೆಯು ತೀರ್ಮಾನ ಕೈಗೊಂಡಿದೆ 

- ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯು ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

Comments

Chiranjivi V ಮೇ 4, 2021, 8:43 ಅಪರಾಹ್ನ
Ganesh Rk Rk Ganesh ಮೇ 10, 2021, 8:17 ಪೂರ್ವಾಹ್ನ
ADVERTISEMENT
Image not found
ADVERTISEMENT