Life is like this loading!

We've to prepare well to perform better

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ IAS /KAS /ಬ್ಯಾಂಕಿಂಗ್ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
Author: Basavaraj Halli | Date:19 ಸೆಪ್ಟೆಂಬರ್ 2021
Image not found
ಕರ್ನಾಟಕ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಾದ UPSC KAS ಬ್ಯಾಂಕಿಂಗ್ SSC RRB ಮತ್ತು ಗ್ರೂಪ್ ಸಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಸದುಪಯೋಗ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ತರಬೇತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.  

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಕ್ಟೋಬರ್ ಅಥವಾ ನವೆಂಬರ್ 2021 ರಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಅರ್ಹತೆ ಹಾಗೂ ಅಂಕಗಳ ಪಡೆದ ಅಂಕಗಳ ಆಧಾರದ ಮೇಲೆ ತರಬೇತಿಗಾಗಿ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 10000 ದಿಂದ 5000 ದವರೆಗೆ ಶಿಷ್ಯವೇತನ ಪಡೆಯಲು ಅರ್ಹರಾಗಿರುತ್ತಾರೆ, ಹಾಗೂ 3 ತಿಂಗಳಿಂದ 9 ತಿಂಗಳವರೆಗೂ ಉಚಿತ ತರಬೇತಿಗೆ ಅರ್ಹತೆ ಪಡೆಯುತ್ತಾರೆ. ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಸಹಾಯಕ್ಕಾಗಿ ಸಂಪರ್ಕಿಸಿ : 

ಸಹಾಯವಾಣಿ ಸಮಯ / HELPLINE TIMINGS : 10:30 am To 5:30 pm

ಸಹಾಯವಾಣಿ ಸಂಖ್ಯೆ / Helpline Number : 080-22207784, 080-22634300

ಇಮೇಲ್ / E-mail : swdpetc2011@gmail.com

Comments

Ambareesh Ys ಸೆಪ್ಟೆ. 19, 2021, 11:42 ಪೂರ್ವಾಹ್ನ
Ambareesh Ys ಸೆಪ್ಟೆ. 19, 2021, 11:43 ಪೂರ್ವಾಹ್ನ
Akshatha Sk ಅಕ್ಟೋ. 20, 2021, 6:34 ಪೂರ್ವಾಹ್ನ