ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ
Published by: Basavaraj Halli | Date:13 ಮೇ 2021

ಕರ್ನಾಟಕ ರಾಜ್ಯದ ಪ್ರಸ್ತುತ ಶೈಕ್ಸನಿಕ ಸಾಲಿನ SSLC ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳ ಹಿನ್ನಲೆ ವಿದ್ಯಾರ್ಥಿಗಳ ಅರೋಗ್ಯ ದೃಷ್ಟಿಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಮುಂದಿನ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಅಲ್ಲದೆ ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

Comments