ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಇಲಾಖೆಯಲ್ಲಿ ಖಾಲಿ ಇರುವ 399 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿರುವ ನಿರೀಕ್ಷಕರು ಮತ್ತು ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈಗಾಗಲೇ KPSC ಇಲಾಖೆಯು ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ, ಅನುಮತಿ ಸಿಕ್ಕ ತಕ್ಷಣ ಅಧಿಸೂಚನೆ ಪ್ರಕಟಿಸಲಿದೆ. ವಿವಿಧ ವೃಂದಗಳ 976 ಹುದ್ದೆಗಳು ಖಾಲಿ ಇವೆ. ಒಟ್ಟಾರೆ ಈ ಇಲಾಖೆಯಲ್ಲಿನ ಶೇ.97 ಹುದ್ದೆಗಳ ಖಾಲಿ ಇದ್ದು, ಈ ಪೈಕಿ ಇಲಾಖೆಯಲ್ಲಿನ ಕರ್ತವ್ಯ ಮತ್ತು ಹೊಣೆಗಾರಿಕೆ ನಿರ್ವಹಿಸಲು ಮೂಲ ವೃಂದದಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ ಹುದ್ದೆಯನ್ನು ನೇರ ನೇಮಕಾತಿ ಮತ್ತು ಪದೋನ್ನತಿಯಿಂದ ನೇಮಕ ಮಾಡಬೇಕಿದೆ. ಪ್ರಸ್ತುತ 9 ಸಹಾಯಕ ನಿರ್ದೇಶಕರ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಕೆಪಿಎಸ್‌ಸಿ ಗೆ ಮಾಹಿತಿ ನೀಡಲಾಗಿದೆ ಎಂದು ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕೆಪಿಎಸ್‌ಸಿ ಉಲ್ಲೇಖಿಸಿದೆ.
KPSC
27 ಸೆಪ್ಟೆಂಬರ್ 2024
1 year ago
Published by Bhagya R K
Comments