ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2021 ರ ಅಧಿಕೃತ ಕೀ ಉತ್ತರಗಳು ಪ್ರಕಟ
Published by: Basavaraj Halli | Date:25 ಆಗಸ್ಟ್ 2021

ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತೀಚೆಗೆ ಶಿಕ್ಷಕರ ಅರ್ಹತಾ ಪರೀಕ್ಷೆ -2021 ನ್ನು ಯಶಸ್ವಿಯಾಗಿ ನಡೆಸಿದ್ದು, ಸದರಿ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರ ಅಧಿಕೃತ ಕೀ ಉತ್ತರಗಳನ್ನು ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪ್ರಕಟಿಸಿದ್ದಕ್ಕೆ ಉತ್ತರಗಳೊಂದಿಗೆ ಪರಿಶೀಲಿಸಬಹುದಾಗಿದೆ.
ಇನ್ನೂ ಕೀ ಉತ್ತರಗಳಲ್ಲಿ ಏನಾದರೂ ತಪ್ಪು ಕಂಡುಬಂದಲ್ಲಿ ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಆನ್ಲೈನ್ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಮಾಹಿತಿಯನ್ನು ಪಡೆಯಿರಿ





Comments