ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿದ ವಿವಿಧ ಹುದ್ದೆಗಳ ಲಿಖಿತ ಪರಿಕ್ಷಾ ದಿನಾಂಕ ಬದಲು | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 23/06/2023 ರಂದು ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ 07/08/2023 ರವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು 2023ರ ಅಕ್ಟೋಬರ್ 28, 29, ಮತ್ತು 30 ರಂದು ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಪ್ರಸ್ತುತ ಸದರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ KEA ಪರಿಷ್ಕೃತ ಪರೀಕ್ಷಾ ದಿನಾಂಕ ಇದೀಗ ಪ್ರಕಟಿಸಿದೆ.
1) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ.
2) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ
3) ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
4) ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಹಾಗೂ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಯಲ್ಲಿನ ಕಲ್ಯಾಣ ಸಂಘಟಕರು ಗ್ರೂಪ್-ಸಿ ಹುದ್ದೆಗೂ ಸಹ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು.
- ಈ ಕುರಿತು ಹೆಚ್ಚಿನ ವಿವರಗಳನ್ನು ಹಾಗೂ ಸವಿವರವಾದ ವೇಳಾಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಡೆಯಬಹುದಾಗಿದೆ.

Comments