ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ವು ವಿವಿಧ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 152 FDA, SDA ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಅಭ್ಯರ್ಥಿಗಳು ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನೇರ ನೇಮಕಾತಿಯಡಿ ಖಾಲಿಯಿರುವ ಹುದ್ದೆಗಳ ಪೈಕಿ ಒಟ್ಟು 152 ವಿವಿಧ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೈಗೊಳ್ಳುವಂತೆ ಸರ್ಕಾರವು ನಿರ್ದೇಶಿಸಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸಹಾಯಕ ಪರಿಸರ ಅಧಿಕಾರಿ, ಸಹಾಯಕ ವೈಜ್ಞಾನಿಕ ಅಧಿಕಾರಿ, ವೈಜ್ಞಾನಿಕ ಸಹಾಯಕ, ಕಾನೂನು ಸಹಾಯಕ ಪ್ರಥಮ ದರ್ಜೆ ಸಹಾಯಕ (FDA) ಮತ್ತು ಎರಡನೇ ವಿಭಾಗ ಸಹಾಯಕ (SDA) ಹುದ್ದೆಗಳ ನೇಮಕಾತಿ ನಡೆಯಲಿದೆ. ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು.
ಹುದ್ದೆಗಳ ವಿವರ : 152
ಸಹಾಯಕ ಪರಿಸರ ಅಧಿಕಾರಿ : 82
ಸಹಾಯಕ ವೈಜ್ಞಾನಿಕ ಅಧಿಕಾರಿ : 10
ವೈಜ್ಞಾನಿಕ ಸಹಾಯಕ : 23
ಕಾನೂನು ಸಹಾಯಕ : 3
ಪ್ರಥಮ ದರ್ಜೆ ಸಹಾಯಕ (FDA) : 4
ಎರಡನೇ ವಿಭಾಗ ಸಹಾಯಕ (SDA) : 30
ಉದ್ಯೋಗ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ...

/WhatsApp_Image_2025-11-14_at_12.23.10.jpeg)




Comments