KEAಯಿಂದ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಂಕಪಟ್ಟಿ ಇದೀಗ ಪ್ರಕಟ
Published by: Bhagya R K | Date:21 ಎಪ್ರಿಲ್ 2025
Image not found

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಅಂತಿಮ ಅಂಕಪಟ್ಟಿ ಮತ್ತು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ದಿನಾಂಕ 22.03.2025 ರಿಂದ 25.03.2025ರ ವರೆಗೆ ಈ ಪರೀಕ್ಷೆಗಳು ನಡೆದಿದ್ದು, ತಾತ್ಕಾಲಿಕ ಕೀ ಉತ್ತರಗಳು ಹಾಗೂ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ 09.04.2025 ರಂದು ಪ್ರಕಟಿಸಲಾಗಿತ್ತು.


                    ಅಭ್ಯರ್ಥಿಗಳಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು 12.04.2025ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿತ್ತು. ಈ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ, ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು 19.04.2025 ರಂದು ಪ್ರಕಟಿಸಲಾಗಿದೆ. ಈ ಅಂಕಪಟ್ಟಿಯಲ್ಲಿ 15.04.2025 ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ಅಂಕಗಳೂ ಸೇರಿಸಲಾಗಿದೆ.


ಸರ್ಕಾರದ ಆದೇಶದಂತೆ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಕನಿಷ್ಠ 35% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಅರ್ಹರೆಂದು ಪರಿಗಣಿಸಿ, ಅವರ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯಕ್ಕೆ ಹಸ್ತಾಂತರಿಸಲಾಗುವುದು. ಇದೀಗ ಸಚಿವಾಲಯದಿಂದ ನಿಯಮಾನುಸಾರ ಆಯ್ಕೆಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುತ್ತದೆ.


ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಪರಿಶೀಲಿಸಲು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Comments