Loading..!

KEA ಬಿಗ್ ಬ್ರೇಕಿಂಗ್: ಮುರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳ ಶಿಕ್ಷಕರ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತೆ ಶುರು!
Published by: Yallamma G | Date:14 ಆಗಸ್ಟ್ 2026
not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವಸತಿ ಶಾಲಾ ಶಿಕ್ಷಕರ ನೇಮಕಾತಿ 2026 ಅರ್ಜಿ ಸಲ್ಲಿಕೆಯನ್ನು ಮರುಪ್ರಾರಂಭಿಸಿದೆ. ಆಗಸ್ಟ್ 18ರಿಂದ ಸೆಪ್ಟೆಂಬರ್ 17ರವರೆಗೆ ಅರ್ಜಿ ಸಲ್ಲಿಸಬಹುದು.

ಶಿಕ್ಷಕ ವೃತ್ತಿಯ ಕನಸು ಕಾಣುತ್ತಿರುವ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ವಸತಿ ಶಾಲಾ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೀಗ ಮತ್ತೆ ಶುರುವಾಗುತ್ತಿದೆ. ಅಭ್ಯರ್ಥಿಗಳು ಆಗಸ್ಟ್ 18, 2026 ರಿಂದ ಸೆಪ್ಟೆಂಬರ್ 17ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಏಕಲವ್ಯ ಶಾಲೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಹೊರಡಿಸಲಾಗಿದ್ದ ಅಧಿಸೂಚನೆಗೆ ಸಂಬಂಧಿಸಿದಂತೆ ಕೆಇಎ ಮಹತ್ವದ ಅಪ್ಡೇಟ್ ನೀಡಿದ್ದು, ಅರ್ಜಿ ಪ್ರಕ್ರಿಯೆಯನ್ನು ಸುಗಮಗೊಳಿಸಿದೆ.

ಕೆಇಎ ವಸತಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಹೊಸ ಲಿಂಕ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಅವಕಾಶ ವಂಚಿತರಾದವರು ಹಾಗೂ ಹೊಸದಾಗಿ ಪ್ರಯತ್ನಿಸುತ್ತಿರುವವರು ಈ ಒಂದು ತಿಂಗಳ ಕಾಲಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದು ಉತ್ತಮ.

ಪ್ರಚಲಿತ ಘಟನೆಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಕೆಇಎ ವಸತಿ ಶಾಲಾ ಶಿಕ್ಷಕರ ನೇಮಕಾತಿ 2026: ಮುಖ್ಯಾಂಶಗಳು
  • ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
  • ಇಲಾಖೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS)
  • ಆನ್ ಲೈನ್ ಅರ್ಜಿ ಸಲ್ಲಿಕೆ (ಮರುಪ್ರಾರಂಭ): 18 ಆಗಸ್ಟ್ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಸೆಪ್ಟೆಂಬರ್ 2026
  • ಅಧಿಕೃತ ವೆಬ್ ಸೈಟ್: cetonline.karnataka.gov.in/kea
ಅರ್ಜಿ ಸಲ್ಲಿಕೆ ಮರುಪ್ರಾರಂಭಕ್ಕೆ ಕಾರಣವೇನು?
ವಸತಿ ಶಾಲೆಗಳಲ್ಲಿ ಪ್ರಾಂಶುಪಾಲರು, ವಿವಿಧ ವಿಷಯಗಳ ಶಿಕ್ಷಕರು, ದೈಹಿಕ ಶಿಕ್ಷಣ, ಚಿತ್ರಕಲಾ ಹಾಗೂ ಕಂಪ್ಯೂಟರ್ ಶಿಕ್ಷಕರ ಭರ್ತಿಗೆ ಈ ಹಿಂದೆ ನೋಟಿಫಿಕೇಶನ್ ಪ್ರಕಟವಾಗಿತ್ತು. ಜುಲೈ 10ರಂದು ಕಲ್ಯಾಣ ಕರ್ನಾಟಕ ವೃಂದದ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಸರ್ಕಾರದ ಹೊಸ ಮೀಸಲಾತಿ ನಿಯಮಗಳ ಅಳವಡಿಕೆ ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಸೇರಿಸುವ ಪ್ರಕ್ರಿಯೆ ನಡುವೆ ನಡೆಯಿತು.

ಇದರ ಪರಿಣಾಮವಾಗಿ ಆಗಸ್ಟ್ 14ರಂದು ಪೂರಕ ಅಧಿಸೂಚನೆ ಹೊರಬಿದ್ದಿದೆ. ಮೀಸಲಾತಿ ಬದಲಾವಣೆ ಹಾಗೂ ಸರ್ವರ್ ಸಮಸ್ಯೆಗಳಿಂದ ಅಭ್ಯರ್ಥಿಗಳು ಪರದಾಡುತ್ತಿದ್ದರು. ಈ ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿರುವ ಪ್ರಾಧಿಕಾರ, ಪರಿಷ್ಕೃತ ರೋಸ್ಟರ್ ನೊಂದಿಗೆ ಆಗಸ್ಟ್ 18ರಿಂದ ಅರ್ಜಿ ಲಿಂಕ್ ಅನ್ನು ಮತ್ತೆ ಆಕ್ಟಿವ್ ಮಾಡಲಿದೆ. ಅಭ್ಯರ್ಥಿಗಳು ತಮ್ಮ ವೃಂದವನ್ನು ಸರಿಯಾಗಿ ಆಯ್ಕೆ ಮಾಡಲು ಈಗ ಸ್ಪಷ್ಟ ಅವಕಾಶ ಸಿಕ್ಕಿದೆ.

ಈಗಾಗಲೇ ಅರ್ಜಿ ಸಲ್ಲಿಸಿದವರು ಏನು ಮಾಡಬೇಕು?
ಇದೊಂದು ಪ್ರಮುಖ ಮಾಹಿತಿಯಾಗಿದೆ. ಈ ಹಿಂದೆ ಯಶಸ್ವಿಯಾಗಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಹಾಕುವ ಅಗತ್ಯವಿಲ್ಲ. ಆದರೆ ಅರ್ಜಿ ಪ್ರಕ್ರಿಯೆ ಅರ್ಧಕ್ಕೆ ನಿಂತಿರುವವರು ಹಾಗೂ ಹೊಸದಾಗಿ ಸೇರ್ಪಡೆಯಾಗಲು ಬಯಸುವವರು ಮಾತ್ರ ಈ ಬಾರಿ ಅರ್ಜಿ ಸಲ್ಲಿಸಬಹುದು. ಅರ್ಜಿ ಭರ್ತಿ ಮಾಡುವಾಗ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲ ವೃಂದವನ್ನು ಸರಿಯಾಗಿ ಆಯ್ಕೆ ಮಾಡಿಕೊಳ್ಳಿ.

KAS, PSI, PC, FDA, SDA, RRB, PDO ಸೇರಿದಂತೆ ಇನ್ನಿತರ ಪರೀಕ್ಷೆಗಳ ಹಳೆ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಸರಳ ವಿಧಾನ
  • ಮೊದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ಕೆಆರ್ ಇಐಎಸ್ ನೇಮಕಾತಿ 2026ರ ಆನ್ ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ವೈಯಕ್ತಿಕ ವಿವರ, ಡಿಗ್ರಿ, ಬಿ.ಇಡಿ, ಟಿಇಟಿ ಅಂಕಗಳು ಹಾಗೂ ಮೀಸಲಾತಿ ವಿವರಗಳನ್ನು ಸರಿಯಾಗಿ ತುಂಬಿ.
  • ಸೂಚಿಸಿದ ಅಳತೆಯ ಫೋಟೋ ಹಾಗೂ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಿ.
  • ಅಂತಿಮವಾಗಿ ನಿಗದಿತ ಶುಲ್ಕ ಪಾವತಿಸಿ ಅರ್ಜಿಯನ್ನು ಸಬ್ಮಿಟ್ ಮಾಡಿ ಹಾಗೂ ಪ್ರಿಂಟ್ ತೆಗೆದುಕೊಳ್ಳಿ.

Comments