Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ
Published by: Yallamma G | Date:15 ಫೆಬ್ರುವರಿ 2023
Image not found

* ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ (DSWR)ಯಲ್ಲಿನದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 30/01/2023 ಮತ್ತು 01/02/2023 ರಂದು  ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.
* ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ (KSSCL)ದಲ್ಲಿನ ಸಹಾಯಕ ವ್ಯವಸ್ಥಾಪಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 30/01/2023 ರಿಂದ  05/02/2023 ರವರೆಗೆ  ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.
ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ. ಸದರಿ ಕೀ ಉತ್ತರಗಳಲ್ಲಿ ಏನಾದರು ಆಕ್ಷೇಪಣೆಗಳಿದ್ದರೆ ದಿನಾಂಕ 14/02/2023 ರಿಂದ 22/02/2023 ವರೆಗೆ ಆಧಾರಸಹಿತ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ.

Comments