Life is like this loading!

We've to prepare well to perform better

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಶೀಘ್ರದಲ್ಲೇ ನೇರ ನೇಮಕಾತಿ
Published by: Yallamma Govindappanavar | Date:3 ಮಾರ್ಚ್ 2023
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಕರ್ನಾಟಕ ರಾಜ್ಯ ಸರಕಾರಿ ಸಂಸ್ಥೆಗಳಲ್ಲಿನ  ವಿವಿಧ ಹುದ್ದೆಗಳ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಒಟ್ಟು 5 ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿಯನ್ನು ನೀಡಿದ್ದು, KEA ಯಿಂದ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವದು, ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.


ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿರುವ ಸಂಸ್ಥೆಗಳ ವಿವರ:

1) ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು.
2) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು
3) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು
4) ಕರ್ನಾಟಕ ಸ್ಟೇಟ್ಸ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್, ಬೆಂಗಳೂರು
5) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು 


ಈ ನೇಮಕಾತಿಯ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ವೇತನ, ಅರ್ಜಿ ಶುಲ್ಕ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಸವಿವರವಾದ ಮಾಹಿತಿಯನ್ನು ಶೀಘ್ರದಲ್ಲೇ ನಿಮ್ಮ KPSCVaani app ನಲ್ಲಿ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ.

Comments

Madan K ಮಾರ್ಚ್ 3, 2023, 5:51 ಅಪರಾಹ್ನ