Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಾಲೇಜು ಶಿಕ್ಷಣ ಇಲಾಖೆ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಮುಂದೂಡಿಕೆ
Published by: Akshata Basavaraj Halli | Date:16 ಫೆಬ್ರುವರಿ 2023
not found

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಂಶುಪಾಲರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 28 ಫೆಬ್ರುವರಿ 2023 ಹಾಗೂ 04 ಮಾರ್ಚ್ 2023 (ಕಡ್ಡಾಯ ಕನ್ನಡ)ರಂದು ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕವಾಗಿ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು, ಸದರಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಅನೇಕ ಅಭ್ಯರ್ಥಿಗಳು ಪ್ರಸ್ತಾಪಿತ ದಿನಾಂಕದಂದು ಮ್ಯಾಕ್ ಮಾನ್ಯತೆ ಕಾರ್ಯಕ್ರಮ ಇರುವುದರಿಂದ ಪರೀಕ್ಷೆಯನ್ನು ಮುಂದೂಡುವಂತೆ ಕೋರಿರುತ್ತಾರೆ. ಕಾರಣ ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಗಳನ್ನು ಶೀಘ್ರದಲ್ಲಿ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಿದೆ.

Comments