ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 400ಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:21 ನವೆಂಬರ್ 2023

ಸರಕಾರಿ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸದ್ಯದಲ್ಲೇ ಸಿಹಿ ಸುದ್ದಿಯನ್ನು ನೀಡಲಿದೆ. KEAಯಿಂದ ಸಾರಿಗೆ ಇಲಾಖೆ, ಪಶು ವೈದ್ಯಕೀಯ, ರಾಜೀವಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯ ಮತ್ತು ನಗರಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ 400ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಡಿಸೆಂಬರ್ ಮೊದಲನೇ ವಾರದಲ್ಲಿ ಅಧಿಸೂಚನೆ ಪ್ರಕಟಿಸಲಿದೆ. ಆಸಕ್ತ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

Comments