ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು.
ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 27/10/2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪರೀಕ್ಷಾ ಪ್ರಾಧಿಕಾರವು ತಾತ್ಕಾಲಿಕ ಜಿಲ್ಲಾವಾರು ಪಟ್ಟಿಯನ್ನು ಪ್ರಕಟಿಸಿದ್ದು ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಜಿಲ್ಲಾವಾರು ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Comments