ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಒಂದು ಸುವರ್ಣಾವಕಾಶ. ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust - KHPT) ಅಧಿಕೃತವಾಗಿ 2025-26ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದನರ್ಸ್ ಮತ್ತು ಕೌನ್ಸಿಲರ್ (Nurse and Counsellor) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೀವು ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸಿದರೆ, ಈ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಮತ್ತು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02-ಜನವರಿ-2026 ರಂದು ಅಥವಾ ಅದಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.
ಶೈಕ್ಷಣಿಕ ಅರ್ಹತೆ: KHPT ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು:
ನರ್ಸ್ ಹುದ್ದೆ: GNM ಅಥವಾ B.Sc Nursing ಪೂರ್ಣಗೊಳಿಸಿರಬೇಕು.
ಕೌನ್ಸಿಲರ್ ಹುದ್ದೆ: MSW (Social Work), ಸೈಕಾಲಜಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅನುಭವ: ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ರಿಂದ 3 ವರ್ಷಗಳ ಕೆಲಸದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ
ಅರ್ಜಿ ಶುಲ್ಕ : ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ (Selection Process) : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:
* ಅರ್ಜಿಗಳ ಪರಿಶೀಲನೆ ಮತ್ತು ಕಿರುಪಟ್ಟಿ (Shortlisting)
* ವೈಯಕ್ತಿಕ ಸಂದರ್ಶನ (Interview)
* ದಾಖಲೆಗಳ ಪರಿಶೀಲನೆ
ವೇತನ ಶ್ರೇಣಿ (Salary Details) : ಆಯ್ಕೆಯಾದ ಅಭ್ಯರ್ಥಿಗಳಿಗೆ KHPT ಸಂಸ್ಥೆಯ ನಿಯಮಾವಳಿಗಳು ಮತ್ತು ಮಾರುಕಟ್ಟೆಯ ಮಾನದಂಡಗಳಿಗೆ ಅನುಗುಣವಾಗಿ ಆಕರ್ಷಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ? (How to Apply)
1. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು:
2. ಮೊದಲಿಗೆ KHPT ಅಧಿಕೃತ ವೆಬ್‌ಸೈಟ್ khpt.org ಗೆ ಭೇಟಿ ನೀಡಿ.
3. ಹೋಮ್ ಪೇಜ್‌ನಲ್ಲಿರುವ 'Work With Us' ಅಥವಾ 'Vacancies' ವಿಭಾಗವನ್ನು ಕ್ಲಿಕ್ ಮಾಡಿ.
4. ಅಲ್ಲಿ ನೀಡಿರುವ Nurse-cum-Counsellor ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಸರಿಯಾಗಿ ಓದಿ.
5. ನಂತರ 'Apply Online' ಬಟನ್ ಕ್ಲಿಕ್ ಮಾಡಿ ನಿಮ್ಮ ವಿವರಗಳನ್ನು ಭರ್ತಿ ಮಾಡಿ.
6. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, 02 ಜನವರಿ 2026 ರೊಳಗೆ ಅರ್ಜಿಯನ್ನು ಸಲ್ಲಿಸಿ.
ಗಮನಿಸಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಸಂಪೂರ್ಣ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-12-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-ಜನವರಿ-2026






Comments