Loading..!

ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ 2025 – ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
Published by: Yallamma G | Date:6 ಡಿಸೆಂಬರ್ 2025
not found

ಕೊಪ್ಪಳ: ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಸುವರ್ಣಾವಕಾಶ. ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ (District Court) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


            ಕೊಪ್ಪಳ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆ ಡಿಸೆಂಬರ್ 2025 ರ ಮೂಲಕ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಕೊಪ್ಪಳ ಇ-ಕೋರ್ಟ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೊಪ್ಪಳ - ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-ಡಿಸೆಂಬರ್-2025 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 2
ಕುಷ್ಟಗಿ ನ್ಯಾಯಾಲಯ ಸಂಕೀರ್ಣ : 1
ಗಂಗಾವತಿ ಕೋರ್ಟ್ ಕಾಂಪ್ಲೆಕ್ಸ್ : 1


ಅರ್ಹತೆಗಳೇನು? (Eligibility)
• ವಿದ್ಯಾರ್ಹತೆ: SSLC (10ನೇ ತರಗತಿ) ಅಥವಾ PUC ಅಥವಾ ಡಿಪ್ಲೋಮಾ ಪಾಸ್ ಆಗಿರಬೇಕು.
• ಕಂಪ್ಯೂಟರ್ ಜ್ಞಾನ: ಕಂಪ್ಯೂಟರ್ ಬೇಸಿಕ್ ಕೋರ್ಸ್ ಸರ್ಟಿಫಿಕೇಟ್ ಕಡ್ಡಾಯ.
• ಟೈಪಿಂಗ್: ಇಂಗ್ಲಿಷ್ ಮತ್ತು ಕನ್ನಡ ಟೈಪಿಂಗ್ (Typing) ಗೊತ್ತಿರಬೇಕು.
• ವಯಸ್ಸು: ಕನಿಷ್ಠ 18 ವರ್ಷ ತುಂಬಿರಬೇಕು.


ಆಯ್ಕೆ ಪ್ರಕ್ರಿಯೆ : 
- ಯಾವುದೇ ಲಿಖಿತ ಪರೀಕ್ಷೆ ಇಲ್ಲ.
- 1 ಹುದ್ದೆಗೆ 3 ಅಭ್ಯರ್ಥಿಗಳಂತೆ (1:3 Ratio) ಶಾರ್ಟ್ ಲಿಸ್ಟ್ ಮಾಡಿ, ನೇರ ಸಂದರ್ಶನ (Walk-in Interview) ನಡೆಸಲಾಗುತ್ತದೆ.
- ನಿಮ್ಮ ಟೈಪಿಂಗ್ ಸ್ಕಿಲ್ಸ್ ನೋಡಿ ಆಯ್ಕೆ ಮಾಡುತ್ತಾರೆ.


ಅರ್ಜಿ ಸಲ್ಲಿಸುವ ವಿಧಾನ : 
=> ಮೊದಲನೆಯದಾಗಿ ಕೊಪ್ಪಳ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ - ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
=> ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
=> ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
=> ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
=> ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
=> ಕೊನೆಗೆ ಅರ್ಜಿ ನಮೂನೆಯನ್ನುಅಂಚೆ ಕಛೇರಿಯ ಮೂಲಕ ಕಳುಹಿಸಬೇಕು. (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ).

ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿ, ಕೊಪ್ಪಳ, ಗವಿಮಠ ರಸ್ತೆ, ಕೊಪ್ಪಳ - 583231 


ಪ್ರಮುಖ ದಿನಾಂಕಗಳು : 
ಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-12-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಡಿಸೆಂಬರ್-2025

Comments