ಕರ್ನಾಟಕ ಲೋಕಸೇವಾ ಆಯೋಗದಲ್ಲಿನ 1,323 SDA ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by: Tajabi Pathan | Date:10 ಜನವರಿ 2023

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 09-01-2023 ರಂದು ದ್ವಿತೀಯ ದರ್ಜೆ ಸಹಾಯಕರ/ ಕಿರಿಯ ಸಹಾಯಕರ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಿದೆ. ಉಳಿಕೆ ಮೂಲವೃಂದ 1122 ಹಾಗೂ ಹೈದ್ರಾಬಾದ್ ಕರ್ನಾಟಕ 201 ಒಟ್ಟುಸೇರಿ 1323 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ ಆಯ್ಕೆಪಟ್ಟಿ ಹಾಗೂ ಕಟ್ ಆಫ್ ಅಂಕಗನ್ನು ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗಾಗಿ 14 ಮೇ 2020 ರಂದು ಅಧಿಸೂಚನೆ ನೀಡಲಾಗಿತ್ತು ಹಾಗೂ ಪರೀಕ್ಷೆಯನ್ನು ದಿನಾಂಕ 18-09-2021 & 19-09-2021 ರಂದು ನಡೆಸಲಾಗಿದ್ದು. ಸದರಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು.

Comments