Loading..!

KPSCಯಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಮುಖ್ಯ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by: Yallamma G | Date:8 ಎಪ್ರಿಲ್ 2025
Image not found

ಕರ್ನಾಟಕ ಲೋಕಸೇವಾ ಆಯೋಗ (KPSC) ವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ  ವೃಂದದ ಸಹಾಯಕ ನಿಯಂತ್ರಕರು ( Assistant Controller ) (ಹೈದ್ರಾಬಾದ್-ಕರ್ನಾಟಕ) 15 ಹುದ್ದೆಗಳ ನೇಮಕಾತಿಗಾಗಿ ದಿನಾಂಕ: 19-11-2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.  


        ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 15-04-2025, 16-04-2025, 17-04-2025 & 19-04-2025 ವರೆಗೆ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತನ್ನ ಇಲಾಖಾ ಜಾಲತಾಣದಲ್ಲಿ ಬಿಡುಗಡೆಮಾಡಿದೆ. ದಿನಾಂಕ: 07-04-2025 ರಿಂದ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 

Comments